ಮುಕ್ತಾಯ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ

ಇಲಾಖೆ ಸ್ಥಾಪನೆಯ ಘನೋದ್ದೇಶ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರು ರೋಗಿಗಳು

ಸ್ವಾತಂತ್ರ್ಯ ಪೂರ್ವದಲ್ಲಿ ಅಂದಿನ ಮೈಸೂರು ಅರಸರು ಜಾರಿಗೆ ತಂದರು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಜನನ ನಿಯಂತ್ರಣಕ್ಕಾಗಿ ಕುಟುಂಬ ಕಲ್ಯಾಣ ಕಾರ್ಯಕ್ರಮವನ್ನು ಸ್ಥಾಪಿಸಿದರು. ಸ್ವಾತಂತ್ರ್ಯ ನಂತರ ಸರ್ಕಾರವು ಸಾರ್ವಜನಿಕ ಆರೋಗ್ಯ ಸೇವೆ ವ್ಯವಸ್ಥೆಯನ್ನು ಮನೆ ಬಾಗಿಲಲ್ಲಿ ಆರೋಗ್ಯ ಸಹಾಯಕರ ಮೂಲಕ ನೀಡುತ್ತಿದೆ.

ಸಾರ್ವಜನಿಕ ಆರೋಗ್ಯ ಸೇವೆಗೆ ಪ್ರಾಮುಖ್ಯತೆಯನ್ನು ನೀಡುವುದು ಇಲಾಖೆಯ ಪ್ರಮುಖ ಗುರಿಯಾಗಿದ್ದು, ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿವಿಧ ಮಾದರಿಯ ಆರೋಗ್ಯ ಸಂಸ್ಥೆಗಳ ಮೂಲಕ ಆರೋಗ್ಯ ಸೇವೆಗಳನ್ನು ನೀಡುತ್ತಿದೆ.

ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಕರ್ನಾಟಕ ಸರ್ಕಾರವು ಮೂರು ಹಂತಗಳಲ್ಲಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಸಾರ್ವಜನಿಕ ಆರೋಗ್ಯ ಸೇವೆಗಳನ್ನು ನೀಡುತ್ತಿದೆ.

ಉಪಕೇಂದ್ರವು ಮೊದಲನೇ ಹಂತವಾಗಿದ್ದು, ಪ್ರಾಥಮಿಕ ಹಂತದ ಆರೋಗ್ಯ ಸೇವೆಯನ್ನು ಸಮುದಾಯಕ್ಕೆ ಒದಗಿಸುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರವು ಗ್ರಾಮ ಹಂತದಲ್ಲಿ ಸಮುದಾಯ ಹಾಗೂ ವೈದ್ಯಾಧಿಕಾರಿಗಳ ನಡುವೆ ಸಂಪರ್ಕ ಕಲ್ಪಿಸಿದ್ದು, ಚಿಕಿತ್ಸೆ ಹಾಗೂ ರೋಗನಿರೋಧಕ ಆರೋಗ್ಯ ರಕ್ಷಣೆಯನ್ನು ಒದಗಿಸುವಲ್ಲಿ ಕಾರ್ಯನಿರತವಾಗಿವೆ.

ಸಮುದಾಯ ಆರೋಗ್ಯ ಕೇಂದ್ರವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೆಫೆರಲ್ ಆರೋಗ್ಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸೂತಿ ಆರೈಕೆ ಮತ್ತು ತಜ್ಞ ವೈದ್ಯರ ಸೇವೆ ಒದಗಿಸುತ್ತಿದೆ.

ಇಲಾಖೆಯ ಪ್ರಥಮ ಉದ್ದೇಶವು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಮೂಲಕ ತಾಯಿ ಮರಣ ಮತ್ತು ಶಿಶುಮರಣವನ್ನು ಕಡಿಮೆಗೊಳಿಸುವುದು, ಕುಟುಂಬ ಕಲ್ಯಾಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಜನಸಂಖ್ಯಾ ಸ್ಪೋಟವನ್ನು ಕಡಿಮೆಗೊಳಿಸುವುದು, ಐಇಸಿ ಕಾರ್ಯಕ್ರಮದ ಮೂಲಕ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳನ್ನು ಕಡಿಮೆಗೊಳಿಸುವುದಾಗಿದೆ. ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಇಲಾಖೆಯ ಪ್ರಥಮ ಧ್ಯೇಯವಾಗಿರುತ್ತದೆ.

ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನವು ಕೆಳಕಂಡಂತಿವೆ:

  • ಗ್ರಾಮೀಣ ಆರೋಗ್ಯ ಕಾರ್ಯಕ್ರಮ
  • ಕುಟುಂಬ ಯೋಜನೆ, ಮಾತೃ ಮತ್ತು ಮಕ್ಕಳ ಆರೋಗ್ಯ
  • ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮ
  • ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಮಾಡುವ ಕಾರ್ಯಕ್ರಮ
  • ರಾಷ್ಟ್ರೀಯ ವೆಕ್ಟರ್ ಬೊರ್ನ್ ರೋಗಗಳ ನಿಯಂತ್ರಣ ಕಾರ್ಯಕ್ರಮ
  • ರಾಷ್ಟ್ರೀಯ ಮಲೇರಿಯಾ ನಿಯಂತ್ರಣ ಕಾರ್ಯಕ್ರಮ
  • ಆರೋಗ್ಯ ಶಿಕ್ಷಣ ಮತ್ತು ತರಬೇತಿ ಕಾರ್ಯಕ್ರಮ
  • ಗಳಗಂಡ ರೋಗ ನಿಯಂತ್ರಣ ಕಾರ್ಯಕ್ರಮ
  • ರಾಷ್ಟ್ರೀಯ ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ
  • ಪ್ರಯೋಗಾಲಯ ಸೇವೆಗಳು

 

ಜಿಲ್ಲಾ ಕಛೇರಿ:

ಜಿಲ್ಲಾ ಆರೋಗ್ಯ ಅಧಿಕಾರಿ

</ br>
ಜಿಲ್ಲಾ ಆರೋಗ್ಯ ಮತ್ತು ಕುಟುಂ ಕಲ್ಯಾಣಾಧಿಕಾರಿಗಳ ಕಾರ್ಯಾಲಯ</ br>

ನಜರ್‍ಬಾದ್</ br>

ಮೈಸೂರು-570010</ br>

ದೂರವಾಣಿ ಸಂಖ್ಯೆ: 0821-2529205</ br>

 

ಸಂಬಂಧಿತ ಅಂತರ್ಜಾಲಪುಟಗಳು </ br>

https://hfwcom.karnataka.gov.in/

</ br>