ಮುಕ್ತಾಯ

ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ

ನಿರ್ದೇಶನ

ನಂಜನಗೂಡು ಪ್ರಸಿದ್ಧವಾಗಿರುವುದು ಇಲ್ಲಿಯ ಶ್ರೀಕಂಠೇಶ್ವರ (ನಂಜುಂಡೇಶ್ವರ) ದೇವಾಲಯದಿಂದ. ಕರ್ನಾಟಕದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಇದು ಊರಿನ ಪೂರ್ವದ ಅಂಚಿನಲ್ಲಿ ಕಪಿಲಾ ಮತ್ತು ಗುಂಡ್ಲುಹೊಳೆಯ (ಕೌಂಡಿನ್ಯ ನದಿ) ಸಂಗಮದ ಬಳಿ ಪೂರ್ವಾಭಿಮುಖವಾಗಿದೆ. ಶ್ರೀಕಂಠೇಶ್ವರ ದೇವಾಲಯವು ದ್ರಾವಿಡ ಶೈಲಿಯ ಕಟ್ಟಡ. ಇದು 117 ಮೀ. ಉದ್ದ, 48 ಮೀ. ಅಗಲ ಇದೆ. ಇದರಲ್ಲಿ 147 ಕಂಬಗಳಿವೆ. ಇದರ ಒಟ್ಟು ಆಚ್ಛಾದಿತ ಪ್ರದೇಶ 4,831 ಚ.ಮೀ. ಇದು ಕರ್ನಾಟಕದಲ್ಲೇ ಅತ್ಯಂತ ದೊಡ್ಡ ದೇವಸ್ಥಾನ. ಹೊರಗೋಡೆಗಳು ಸುಮಾರು 3.7 ಮೀ. ಎತ್ತರವಾಗಿವೆ. ಸುತ್ತಲೂ ದಕ್ಷಿಣ, ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಅಧಿಷ್ಠಾನ, ಹಿಂದೆ ಗೋಡೆ, ಮುಂದೆ ಕಂಬಸಾಲಿರುವ ಕೈಸಾಲೆ ಇವೆ. (ಈಗ ದಕ್ಷಿಣದ ಕೈಸಾಲೆಯನ್ನು ಪೂರ್ಣವಾಗಿಯೂ ಉತ್ತರದ್ದನ್ನು ಸ್ವಲ್ಪ ಭಾಗಗಳಲ್ಲಿಯೂ ಮುಚ್ಚಲಾಗಿದೆ). ಮೇಲೆ ಸುತ್ತಲೂ ದೇವ ಮತ್ತು ಇತರ ಶಿಲ್ಪಗಳಿರುವ ಕೂಟ ಮತ್ತು ಶಿಖರಗಳ ಗಚ್ಚಿನ ಹಾರ ಇದೆ. ಪೂರ್ವಭಾಗದಲ್ಲಿನ ಮಹಾದ್ವಾರದ ಮುಂದೆ ಇಕ್ಕೆಡೆ ಕೈಸಾಲೆಯಿರುವ ಒಂದು ಮುಖಮಂಟಪವಿದೆ. ಮಹಾದ್ವಾರ ಬೃಹತ್ ರಚನೆ. ಒಳಚಾವಣಿಯ ಎತ್ತರ ಸುಮಾರು 5.5 ಮೀ. ವಿಶಾಲ ಮಂಟಪದಂತಿರುವ ಈ ಭಾಗದಲ್ಲಿನ ದಪ್ಪ ಎತ್ತರದ ಬಾಗಿಲ ತೋಳುಗಳ ಮೇಲೆ ಮೋಹಿನಿ, ದ್ವಾರಪಾಲಕ ಮೊದಲಾದ ಶಿಲ್ಪಾಲಂಕರಣಗಳಿವೆ. ಮಹಾದ್ವಾರದ ಮೇಲೆ ಏಳು ಅಂತಸ್ತುಗಳಲ್ಲಿ ಎದ್ದಿರುವ ಸುಮಾರು 37 ಮೀ. ಎತ್ತರದ ಬೃಹತ್ ಗೋಪುರದ ಮೇಲ್ತುದಿಯಲ್ಲಿ ಚಿನ್ನದ ಕಲಶ, 3 ಮೀಟರುಗಳಿಗೂ ಎತ್ತರವಾಗಿರುವ ಏಳು ಕಲಶಗಳನ್ನು ಅಷ್ಟೇ ಎತ್ತರದ ಎರಡು ಕೊಂಬುಗಳ ಮಧ್ಯೆ ಸಾಲಾಗಿ ಜೋಡಿಸಲಾಗಿದೆ.

ಫೋಟೋ ಗ್ಯಾಲರಿ

  • ಗೋಪುರದ ಮುಂಭಾಗದ ನೋಟ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ, ನಂಜನಗೂಡು
    ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ, ನಂಜನಗೂಡು
  • ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿನ ಶಿವ ಪ್ರತಿಮೆ
    ಶಿವ ಪ್ರತಿಮೆ, ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ, ನಂಜನಗೂಡು
  • ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಬಳಿ ಕಪಿಲಾ ನದಿ
    ಕಪಿಲಾ ನದಿ - ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ, ನಂಜನಗೂಡು

ತಲುಪುವ ಬಗೆ :

ವಿಮಾನದಲ್ಲಿ

ವಿಮಾನ ನಿಲ್ದಾಣ ದಿಂದ :15.6 ಕಿಲೋ ಮೀಟರ್

ರೈಲಿನಿಂದ

ರೈಲ್ವೆ ನಿಲ್ದಾಣ ದಿಂದ :25.4 ಕಿಲೋ ಮೀಟರ್

ರಸ್ತೆ ಮೂಲಕ

ಕ.ರಾ.ರ.ಸಾ.ನಿ ಮೈಸೂರು ನಿಲ್ದಾಣ ದಿಂದ :25 ಕಿಲೋ ಮೀಟರ್