ತಲಕಾಡು ಪುಣ್ಯಕ್ಷೇತ್ರ
ನಿರ್ದೇಶನತಲಾ ಮತ್ತು ಕಾಡ ಎಂಬ ಇಬ್ಬರು ಕಿರಾತ ಸೋದರರಿಂದ ಈ ಊರಿಗೆ ತಲಕಾಡು ಎಂದು ಹೆಸರು ಬಂದಿದೆ ಎಂಬುದು ಸ್ಥಳ ಪುರಾಣ. ತಲಕಾಡಿನ ಶಿವನಿಗೆ ಗಜಾರಣ್ಯನಾಥ ಎಂದೂ ಕರೆಯುತ್ತಾರೆ
ಮೈಸೂರು ಜಿಲ್ಲೆಯಲ್ಲಿನ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾಗಿದೆ. ಇದು ಮೈಸೂರಿನಿಂದ ಸುಮಾರು 45 ಕಿ.ಮೀ ದೂರದಲ್ಲಿದೆ. ಇಲ್ಲಿರುವ ದೇವಾಲಯಗಳು ಗಂಗರ ಕಾಲದ ದೇವಾಲಯಗಳು. ಇಲ್ಲಿ ನಡೆಯುವ ಪಂಚಲಿಂಗ ದರ್ಶನ ವಿಶೇಷವಾದದ್ದು ಹಾಗೂ ಪಂಚಲಿಂಗ ದರ್ಶನವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಇದು ಐತಿಹಾಸಿಕವಾಗಿ ಹಾಗೂ ಧಾರ್ಮಿಕವಾಗಿ ಪ್ರಸಿದ್ದ ಸ್ಥಳವಾಗಿದೆ. ತಲಕಾಡು ಒಂದು ಕಾಲದಲ್ಲಿ 30 ದೇವಾಲಯಗಳಿಂದ ಕೂಡಿದ ಭವ್ಯ ನಗರವಾಗಿತ್ತು. ಆದರೆ 16ನೇ ಶತಮಾನದಲ್ಲಿ ಇವುಗಳೆಲ್ಲವು ಮರಳಿನಲ್ಲಿ ಮುಚ್ಚಿ ಹೋದವು.
ಎರಡು ನಕ್ಷತ್ರಗಳು ಒಂದುಗೂಡಲು ಅಂದರೆ ಪಂಚಲಿಂಗ ದರ್ಶನ ಕಾರ್ತಿಕ ಮಾಸದಲ್ಲಿ ಅಮವಾಸ್ಯೆಯ ದಿನ ಆಚರಿಸಲಾಗುತ್ತದೆ. ಸಂಪ್ರದಾಯಸ್ಥರು ಮೊದಲು ಗೋಕರ್ಣ ತೀರ್ಥದಲ್ಲಿ ಸ್ನಾನ ಮಾಡಬೇಕು. ನಂತರ ಗೋಕರ್ಣೇಶ್ವರ ಮತ್ತು ಚಂಡಿಕಾ ದೇವಿ ಪೂಜೆ, ತದನಂತರ ವೈಧ್ಯನಾಥೇಶ್ವರನ ಪೂಜೆ, ನಂತರ ಕ್ರಮವಾಗಿ ಅರ್ಕೇಶ್ವರ, ಪಾತಾಳೇಶ್ವರ, ಮರುಳೇಶ್ವರ, ಮಲ್ಲಿಕಾರ್ಜುನರಿಗೆ ಪೂಜೆ ಮತ್ತು ಕೀರ್ತಿ ನಾರಾಯಣ ಪೂಜೆ.
ಫೋಟೋ ಗ್ಯಾಲರಿ
ತಲುಪುವ ಬಗೆ :
ವಿಮಾನದಲ್ಲಿ
ವಿಮಾನ ನಿಲ್ದಾಣ ದಿಂದ : 54ಕಿಲೋ ಮೀಟರ್
ರೈಲಿನಿಂದ
ರೈಲ್ವೆ ನಿಲ್ದಾಣ ದಿಂದ : 49 ಕಿಲೋ ಮೀಟರ್
ರಸ್ತೆ ಮೂಲಕ
ಮೈಸೂರಿನ ಪ್ರಮುಖ ನಿಲ್ದಾಣ ಗಳಿಂದ ಇರುವ ಅಂತರ ಕ.ರಾ.ರ.ಸಾ.ನಿ ಮೈಸೂರು ನಿಲ್ದಾಣ ದಿಂದ : 47 ಕಿಲೋ ಮೀಟರ್